ಕಷ್ಟಪಟ್ಟು ಓದಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿರುವ ಗ್ರಾಮೀಣಪ್ರದೇಶದ ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅವಾಂತರದಿಂದಾಗಿ ಪರೀಕ್ಷೆಯಲ್ಲಿ `ಅನುತ್ತೀರ್ಣ' ಆಗಬೇಕಾದ ಪ್ರಮೇಯ ಸೃಷ್ಟಿಯಾಗಿದೆ.
`ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಿ ಕೆರೆ ಕಟ್ಟೆಗಳು ತುಂಬಿ ಹರಿಯಲಿ. ರಾಜ್ಯದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣವಾಗಲಿ ಎಂದು ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿ ಬಳಿ ಪ್ರಾರ್ಥಿಸಿದ್ದೇನೆ' ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದ 22ನೇ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಗರದ ಕಂಠೀರವ ಕ್ರೀಡಾಂಗಣ ಸಜ್ಜುಗೊಂಡಿದೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯದ ಮೊದಲ ಹಾಗೂ ಹಿಂದುಳಿದ ವರ್ಗಗಳಿಂದ ಬಂದ ಐದನೇ ಮುಖ್ಯಮಂತ್ರಿಯಾಗಿ ಸೋಮವಾರ (ಬಸವೇಶ್ವರ ಜಯಂತಿ) ಬೆಳಿಗ್ಗೆ 11.40ಕ್ಕೆ ಪ್ರಮಾಣವಚನ ಸ್ವೀಕರಿಸುವರು.
ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕೋರ್ಸ್‌ಗಳಿಗಾಗಿ ಕಾಮೆಡ್-ಕೆ ಹಮ್ಮಿಕೊಂಡಿದ್ದ ಪ್ರವೇಶ ಪರೀಕ್ಷೆಗೆ, ದೇಶದ ವಿವಿಧೆಡೆಗಳಿಂದ ಆಗಮಿಸಿದ್ದ 73,650 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು.
`ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಪಕ್ಷದ ಹೈಕಮಾಂಡ್ ನಿರ್ಧಾರ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಗಲಭೆ ನಡೆಸುವುದು ಸರಿಯಲ್ಲ' ಎಂದು ಕೇಂದ್ರ ಕಾರ್ಮಿಕ ಇಲಾಖೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡದೇ ಇರುವುದನ್ನು ಖಂಡಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿ ವಾಹನಗಳು, ಅಂಗಡಿಗಳಿಗೆ ಕಲ್ಲು ತೂರಿದರು.
ಕೆಆರ್‌ಎಸ್ ಆಣೆಕಟ್ಟಿನಲ್ಲಿ ನೀರು ಬಹುತೇಕ ಬತ್ತಿದೆ, ನೆಲ ಬಿರುಕು ಬಿಟ್ಟಿದೆ.
ರಾಜ್ಯದ 14ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರ ಪೈಕಿ 74 ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. ಈ ಪೈಕಿ 39 ಮಂದಿ ಗಂಭೀರ ಸ್ವರೂಪದ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಚುನಾವಣಾ ಕಾವಲು ಸಮಿತಿ ಹೇಳಿದೆ.
ಅಕ್ರಮ ಗಣಿಗಾರಿಕೆ ಮೂಲಕ ಹಣ ಲೂಟಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು. ಆದರೆ ಇದರಲ್ಲಿ ಡಿನೋಟಿಫಿಕೇಷನ್ ಹಗರಣ ಸೇರಿಸುವುದಿಲ್ಲ ಎಂದ ಅವರು, ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ `ಸಕಾಲ' ಯೋಜನೆಯನ್ನು ಪುನರ್ ಪರಿಶೀಲನೆ ಮಾಡಲಾಗುವುದು.
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.
ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಏಕಾಏಕಿ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಓಡಾಟ ಗಮನ ಸೆಳೆದಿತ್ತು. ಸೋಮವಾರ ಇದೇ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಂಗ ಸಜ್ಜುಗೊಳಿಸುವ ನಿಟ್ಟಿನಲ್ಲಿ ತರಾತುರಿಯ ಸಿದ್ಧತೆ ನಡೆದಿತ್ತು. ಆದರೆ ಈ ಕಾರ್ಯಕ್ರಮವನ್ನು ಇಲ್ಲಿ ನಡೆಸುವ ಕುರಿತು ಕ್ರೀಡಾ ವಲಯದಲ್ಲಿ ವಿಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿವೆ.
ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಜೊತೆಗಿನ ಜಂಟಿ ಸಭೆಯಲ್ಲಿ ಪಾಲ್ಗೊಳ್ಳದಿರುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಹಂಗಾಮಿ ಅಧ್ಯಕ್ಷ ವಿ.ಕೆ ಮಲ್ಹೋತ್ರಾ ಮತ್ತು ಭಾರತಕ್ಕೆ ಐಒಸಿ ಸದಸ್ಯ ರಣಧೀರ್ ಸಿಂಗ್ ನಿರಾಕರಿಸಿದ್ದಾರೆ.